1
ಯೆಹೋ 1:9
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
Compare
Explore ಯೆಹೋ 1:9
2
ಯೆಹೋ 1:8
ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
Explore ಯೆಹೋ 1:8
3
ಯೆಹೋ 1:7
ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
Explore ಯೆಹೋ 1:7
4
ಯೆಹೋ 1:5
ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.
Explore ಯೆಹೋ 1:5
5
ಯೆಹೋ 1:6
ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
Explore ಯೆಹೋ 1:6
6
ಯೆಹೋ 1:3
ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.
Explore ಯೆಹೋ 1:3
7
ಯೆಹೋ 1:2
“ನನ್ನ ಸೇವಕನಾದ ಮೋಶೆ ಸತ್ತನು; ನೀನು ಈಗ ಹೊರಟು ಸಮಸ್ತ ಇಸ್ರಾಯೇಲ್ ಜನರೊಂದಿಗೆ ಈ ಯೊರ್ದನ್ ನದಿಯನ್ನು ದಾಟಿ, ನಾನು ಅವರಿಗೆ ಕೊಡುವ ದೇಶಕ್ಕೆ ಹೋಗು.
Explore ಯೆಹೋ 1:2
8
ಯೆಹೋ 1:1
ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
Explore ಯೆಹೋ 1:1
9
ಯೆಹೋ 1:4
ಅರಣ್ಯಗಳು ಹಾಗೂ ಈ ಲೆಬನೋನ್ ಪರ್ವತದಿಂದ ಮೊದಲುಗೊಂಡು ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು; ನಿಮ್ಮ ಸೀಮೆಯು ಪಶ್ಚಿಮದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.
Explore ಯೆಹೋ 1:4
10
ಯೆಹೋ 1:18
ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.
Explore ಯೆಹೋ 1:18
11
ಯೆಹೋ 1:11
“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
Explore ಯೆಹೋ 1:11
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos