ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.