1
ಮತ್ತಾ 1:21
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
Compare
Explore ಮತ್ತಾ 1:21
2
ಮತ್ತಾ 1:23
“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
Explore ಮತ್ತಾ 1:23
3
ಮತ್ತಾ 1:20
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
Explore ಮತ್ತಾ 1:20
4
ಮತ್ತಾ 1:18-19
ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
Explore ಮತ್ತಾ 1:18-19
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos