1
ಮತ್ತಾ 12:36-37
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
Compare
Explore ಮತ್ತಾ 12:36-37
2
ಮತ್ತಾ 12:34
ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Explore ಮತ್ತಾ 12:34
3
ಮತ್ತಾ 12:35
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ.
Explore ಮತ್ತಾ 12:35
4
ಮತ್ತಾ 12:31
ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.
Explore ಮತ್ತಾ 12:31
5
ಮತ್ತಾ 12:33
“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.
Explore ಮತ್ತಾ 12:33
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos