1
ಮತ್ತಾ 13:23
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
Compare
Explore ಮತ್ತಾ 13:23
2
ಮತ್ತಾ 13:22
ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
Explore ಮತ್ತಾ 13:22
3
ಮತ್ತಾ 13:19
ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Explore ಮತ್ತಾ 13:19
4
ಮತ್ತಾ 13:20-21
ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
Explore ಮತ್ತಾ 13:20-21
5
ಮತ್ತಾ 13:44
“ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Explore ಮತ್ತಾ 13:44
6
ಮತ್ತಾ 13:8
ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
Explore ಮತ್ತಾ 13:8
7
ಮತ್ತಾ 13:30
ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
Explore ಮತ್ತಾ 13:30
YouVersion uses cookies to personalize your experience. By using our website, you accept our use of cookies as described in our Privacy Policy
Home
Bible
Plans
Videos