1
ಅಪೊಸ್ತಲರ ಕಾರ್ಯಗಳು 17:27
ಪರಿಶುದ್ದ ಬೈಬಲ್
KERV
“ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.
Compare
Explore ಅಪೊಸ್ತಲರ ಕಾರ್ಯಗಳು 17:27
2
ಅಪೊಸ್ತಲರ ಕಾರ್ಯಗಳು 17:26
ದೇವರು ಒಬ್ಬ ಮನುಷ್ಯನನ್ನು ಸೃಷ್ಟಿ ಮಾಡುವುದರ ಮೂಲಕ ಮಾನವ ಜನಾಂಗವನ್ನು ಆರಂಭಿಸಿದನು. ಅವನಿಂದ ಬೇರೆಲ್ಲ ಜನರನ್ನು ಉತ್ಪತ್ತಿಮಾಡಿ, ಪ್ರಪಂಚದ ಎಲ್ಲೆಲ್ಲಿಯೂ ಅವರು ವಾಸಿಸುವಂತೆ ಮಾಡಿದನು; ಅವರು ಯಾವಾಗ ಮತ್ತು ಎಲ್ಲೆಲ್ಲಿ ವಾಸಿಸಬೇಕೆಂಬುದನ್ನು ಸರಿಯಾಗಿ ನಿರ್ಧರಿಸಿದನು.
Explore ಅಪೊಸ್ತಲರ ಕಾರ್ಯಗಳು 17:26
3
ಅಪೊಸ್ತಲರ ಕಾರ್ಯಗಳು 17:24
“ದೇವರ ಬಗ್ಗೆಯೇ ನಾನು ನಿಮಗೆ ಹೇಳುತ್ತಿದ್ದೇನೆ! ಇಡೀ ಪ್ರಪಂಚವನ್ನು ಮತ್ತು ಅದರಲ್ಲಿರುವ ಪ್ರತಿಯೊಂದನ್ನು ಸೃಷ್ಟಿಮಾಡಿದಾತನೇ ಆ ದೇವರು. ಆತನೇ ಭೂಮ್ಯಾಕಾಶಗಳ ಒಡೆಯನು. ಮನುಷ್ಯರು ನಿರ್ಮಿಸುವ ಗುಡಿಗಳಲ್ಲಿ ಆತನು ಜೀವಿಸುವವನಲ್ಲ.
Explore ಅಪೊಸ್ತಲರ ಕಾರ್ಯಗಳು 17:24
4
ಅಪೊಸ್ತಲರ ಕಾರ್ಯಗಳು 17:31
ಪ್ರಪಂಚದ ಜನರೆಲ್ಲರಿಗೂ ನ್ಯಾಯತೀರಿಸುವುದಕ್ಕಾಗಿ ದೇವರು ಒಂದು ದಿನವನ್ನು ಗೊತ್ತುಪಡಿಸಿದ್ದಾನೆ. ಅಂದು ನ್ಯಾಯತೀರಿಸುವುದಕ್ಕಾಗಿ ಆತನು ಒಬ್ಬ ವ್ಯಕ್ತಿಯನ್ನು ಬಹುಕಾಲದ ಹಿಂದೆಯೇ ಆರಿಸಿಕೊಂಡಿದ್ದಾನೆ. ಇದನ್ನು ಎಲ್ಲರಿಗೂ ಖಚಿತಪಡಿಸುವುದಕ್ಕಾಗಿ ಆ ವ್ಯಕ್ತಿಯನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾನೆ.”
Explore ಅಪೊಸ್ತಲರ ಕಾರ್ಯಗಳು 17:31
5
ಅಪೊಸ್ತಲರ ಕಾರ್ಯಗಳು 17:29
“ನಾವು ದೇವರ ಮಕ್ಕಳಾಗಿದ್ದೇವೆ. ಆದ್ದರಿಂದ ಜನರು ಊಹಿಸಿಕೊಳ್ಳುವ ರೀತಿಯಲ್ಲಾಗಲಿ ನಿರ್ಮಿಸುವ ರೀತಿಯಲ್ಲಾಗಲಿ ದೇವರಿದ್ದಾನೆಂದು ನೀವು ಯೋಚಿಸಕೂಡದು. ಆತನು ಬೆಳ್ಳಿಬಂಗಾರ ಮತ್ತು ಕಲ್ಲುಗಳ ರೂಪದಲ್ಲಿಲ್ಲ.
Explore ಅಪೊಸ್ತಲರ ಕಾರ್ಯಗಳು 17:29
Home
Bible
Plans
Videos