1
ಅಪೊಸ್ತಲರ ಕಾರ್ಯಗಳು 20:35
ಪರಿಶುದ್ದ ಬೈಬಲ್
KERV
ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.
Compare
Explore ಅಪೊಸ್ತಲರ ಕಾರ್ಯಗಳು 20:35
2
ಅಪೊಸ್ತಲರ ಕಾರ್ಯಗಳು 20:24
ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.
Explore ಅಪೊಸ್ತಲರ ಕಾರ್ಯಗಳು 20:24
3
ಅಪೊಸ್ತಲರ ಕಾರ್ಯಗಳು 20:28
ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.
Explore ಅಪೊಸ್ತಲರ ಕಾರ್ಯಗಳು 20:28
4
ಅಪೊಸ್ತಲರ ಕಾರ್ಯಗಳು 20:32
“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.
Explore ಅಪೊಸ್ತಲರ ಕಾರ್ಯಗಳು 20:32
Home
Bible
Plans
Videos