1
ಆಮೋಸ 7:14-15
ಪರಿಶುದ್ದ ಬೈಬಲ್
KERV
ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ. ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು.
Compare
Explore ಆಮೋಸ 7:14-15
2
ಆಮೋಸ 7:8
ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.
Explore ಆಮೋಸ 7:8
Home
Bible
Plans
Videos