1
ಮತ್ತಾಯನ ಸುವಾರ್ತೆ 21:22
ಪರಿಶುದ್ದ ಬೈಬಲ್
KERV
ನೀವು ನಂಬಿ, ಪ್ರಾರ್ಥನೆಯಲ್ಲಿ ಏನನ್ನೇ ಕೇಳಿದರೂ ನಿಮಗೆ ಅದು ದೊರೆಯುವುದು” ಎಂದು ಉತ್ತರಕೊಟ್ಟನು.
Compare
Explore ಮತ್ತಾಯನ ಸುವಾರ್ತೆ 21:22
2
ಮತ್ತಾಯನ ಸುವಾರ್ತೆ 21:21
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಸಂಶಯಪಡದೆ ನಂಬಿದರೆ ನಾನು ಈ ಮರಕ್ಕೆ ಮಾಡಿದಂತೆ ನೀವೂ ಮಾಡಲು ಸಾಧ್ಯ. ಅಲ್ಲದೆ ಇನ್ನೂ ಹೆಚ್ಚಾಗಿ ಮಾಡಲು ಸಾಧ್ಯ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಪೂರ್ಣ ನಂಬಿಕೆಯಿಂದ ಹೇಳಿದರೆ ಅಂತೆಯೇ ಸಂಭವಿಸುವುದು.
Explore ಮತ್ತಾಯನ ಸುವಾರ್ತೆ 21:21
3
ಮತ್ತಾಯನ ಸುವಾರ್ತೆ 21:9
ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”
Explore ಮತ್ತಾಯನ ಸುವಾರ್ತೆ 21:9
4
ಮತ್ತಾಯನ ಸುವಾರ್ತೆ 21:13
ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ” ಎಂದು ಹೇಳಿದನು.
Explore ಮತ್ತಾಯನ ಸುವಾರ್ತೆ 21:13
5
ಮತ್ತಾಯನ ಸುವಾರ್ತೆ 21:5
“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”
Explore ಮತ್ತಾಯನ ಸುವಾರ್ತೆ 21:5
6
ಮತ್ತಾಯನ ಸುವಾರ್ತೆ 21:42
ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’
Explore ಮತ್ತಾಯನ ಸುವಾರ್ತೆ 21:42
7
ಮತ್ತಾಯನ ಸುವಾರ್ತೆ 21:43
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ದೇವರ ರಾಜ್ಯವು ನಿಮ್ಮಿಂದ ತೆಗೆದುಹಾಕಲ್ಪಟ್ಟು ಆ ರಾಜ್ಯದಲ್ಲಿ ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಮಾಡುವವರಿಗೆ ಕೊಡಲ್ಪಡುವುದು.
Explore ಮತ್ತಾಯನ ಸುವಾರ್ತೆ 21:43
Home
Bible
Plans
Videos