1
ಮತ್ತಾಯನ ಸುವಾರ್ತೆ 27:46
ಪರಿಶುದ್ದ ಬೈಬಲ್
KERV
ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸು, “ ಏಲೀ, ಏಲೀ, ಲಮಾ ಸಬಕ್ತಾನಿ? ” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದನು. ಹೀಗೆಂದರೆ, “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟುಬಿಟ್ಟೆ?” ಎಂದರ್ಥ.
Compare
Explore ಮತ್ತಾಯನ ಸುವಾರ್ತೆ 27:46
2
ಮತ್ತಾಯನ ಸುವಾರ್ತೆ 27:51-52
ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು. ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.
Explore ಮತ್ತಾಯನ ಸುವಾರ್ತೆ 27:51-52
3
ಮತ್ತಾಯನ ಸುವಾರ್ತೆ 27:50
ಬಳಿಕ ಯೇಸು ಮತ್ತೆ ಗಟ್ಟಿಯಾದ ಧ್ವನಿಯಲ್ಲಿ ಕೂಗಿ ಪ್ರಾಣಬಿಟ್ಟನು.
Explore ಮತ್ತಾಯನ ಸುವಾರ್ತೆ 27:50
4
ಮತ್ತಾಯನ ಸುವಾರ್ತೆ 27:54
ಯೇಸುವನ್ನು ಕಾಯುತ್ತಿದ್ದ ಸೇನಾಧಿಪತಿ ಮತ್ತು ಸೈನಿಕರು ಭೂಕಂಪವನ್ನು ಮತ್ತು ನಡೆದದ್ದನ್ನು ಕಂಡು ಬಹಳವಾಗಿ ಹೆದರಿ, “ಈತನು ನಿಜವಾಗಿಯೂ ದೇವರ ಮಗನಾಗಿದ್ದನು!” ಎಂದು ಹೇಳಿದರು.
Explore ಮತ್ತಾಯನ ಸುವಾರ್ತೆ 27:54
5
ಮತ್ತಾಯನ ಸುವಾರ್ತೆ 27:45
ಅಂದು ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ದೇಶದಲ್ಲೆಲ್ಲಾ ಕತ್ತಲೆ ಕವಿಯಿತು.
Explore ಮತ್ತಾಯನ ಸುವಾರ್ತೆ 27:45
6
ಮತ್ತಾಯನ ಸುವಾರ್ತೆ 27:22-23
ಪಿಲಾತನು, “ಹಾಗಾದರೆ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಿದನು. ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಉತ್ತರಕೊಟ್ಟರು. ಪಿಲಾತನು, “ಅವನನ್ನು ಶಿಲುಬೆಗೇರಿಸೆಂದು ನೀವು ಕೇಳುವುದೇಕೆ? ಅವನೇನು ತಪ್ಪುಮಾಡಿದ್ದಾನೆ?” ಎಂದು ಕೇಳಿದನು. ಆದರೆ ಜನರೆಲ್ಲರೂ, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಕೂಗಿದರು.
Explore ಮತ್ತಾಯನ ಸುವಾರ್ತೆ 27:22-23
Home
Bible
Plans
Videos