ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ. ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’ ‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.