YouVersion Logo
Search Icon

ಲೂಕ 23

23
ಪಿಲಾತನು ಯೇಸುವನ್ನು ವಿಚಾರಿಸಿ ಆತನಲ್ಲಿ ಅಪರಾಧವಿಲ್ಲವೆಂದು ಕಂಡರೂ ಆತನಿಗೆ ಮರಣದಂಡನೆಯನ್ನು ವಿಧಿಸಿದ್ದು
(ಮತ್ತಾ. 27.2,11-31; ಮಾರ್ಕ. 15.1-20; ಯೋಹಾ. 18.28—19.16)
1ಅಲ್ಲಿ ಕೂಡಿದ್ದವರೆಲ್ಲರು ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದುಕೊಂಡು ಹೋಗಿ - 2ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು. 3ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಹೇಳಲು 4ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು. 5ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು. 6ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ 7ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು.
8ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು; ಯಾಕಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವದಾದರೂ ಒಂದು ಸೂಚಕಕಾರ್ಯವಾಗುವದನ್ನು ನೋಡಬೇಕೆಂದು ನಿರೀಕ್ಷಿಸಿದನು. 9ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ. 10ಮಹಾಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಮೇಲೆ ಬಹು ಬಲವಾಗಿ ದೂರು ಹೇಳುತ್ತಿದ್ದರು. 11ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು. 12ಅದೇ ದಿನದಲ್ಲಿ ಹೆರೋದನೂ ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು; ಅದಕ್ಕಿಂತ ಮೊದಲು ವೈರಿಗಳಾಗಿದ್ದರು.
13ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ 14ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ. 15ಹೆರೋದನಿಗಾದರೂ ಕಾಣಲಿಲ್ಲ; ಅವನು ಇವನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಇವನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು. 16ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು.#23.16 ಕೆಲವು ಪ್ರತಿಗಳಲ್ಲಿ 17ನೆಯ ವಚನ ಉಂಟು; ಅದರಲ್ಲಿ - ಅಧಿಪತಿಯು ಹಬ್ಬದ ಕಾಲದಲ್ಲಿ ಸೆರೆಯವರೊಳಗೆ ಒಬ್ಬನನ್ನು ಬಿಡಿಸಬೇಕಾಗಿತ್ತೆಂದು ಬರೆದದೆ. 18ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು. 19ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ನಿವಿುತ್ತವಾಗಿಯೂ ಕೊಲೆಯ ನಿವಿುತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು. 20ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ತಿರಿಗಿ ಅವರ ಸಂಗಡ ಮಾತಾಡಿದನು. 21ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗುತ್ತಿದ್ದರು. 22ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು. 23ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು. 24ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ 25ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.
ಯೇಸುವನ್ನು ಶಿಲುಬೆಗೆ ಹಾಕಿದ್ದು ; ಆತನು ಪ್ರಾಣಬಿಟ್ಟದ್ದು
(ಮತ್ತಾ. 27.32-56; ಮಾರ್ಕ. 15.21-41; ಯೋಹಾ. 19.17-30)
26ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
27ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಆತನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡುಕೊಳ್ಳುತ್ತಾ ಆತನ ವಿಷಯದಲ್ಲಿ ಗೋಳಾಡುತ್ತಾ ಇದ್ದರು. 28ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ. 29ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ. 30ಆ ಕಾಲದಲ್ಲಿ ಜನರು - ಬೆಟ್ಟಗಳೇ, ನಮ್ಮ ಮೇಲೆ ಬೀಳಿರಿ; ಗುಡ್ಡಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು. 31ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.
32ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.
33ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು. 34ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು. 35ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು. 36ಸಿಪಾಯಿಗಳೂ ಆತನನ್ನು ಹಾಸ್ಯಮಾಡಿದರು; ಅವರು ಆತನ ಹತ್ತಿರ ಬಂದು ಹುಳಿ ಮದ್ಯವನ್ನು ತೋರಿಸಿ - 37ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ರಕ್ಷಿಸಿಕೋ ಅಂದರು. 38ಇದಲ್ಲದೆ ಆತನ ಮೇಲ್ಗಡೆಯಲ್ಲಿ - ಇವನು ಯೆಹೂದ್ಯರ ಅರಸನು ಎಂಬದಾಗಿ ಒಂದು ವಿಳಾಸವಿತ್ತು.
39ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ 40ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ? 41ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ಅಲ್ಲದ್ದೇನೂ ಮಾಡಲಿಲ್ಲ ಎಂದು ಹೇಳಿ - 42ಯೇಸುವೇ, ನೀನು ನಿನ್ನ ರಾಜ್ಯವನ್ನು#23.42 ಕೆಲವು ಪ್ರತಿಗಳಲ್ಲಿ ರಾಜ್ಯಾಧಿಕಾರಕ್ಕೆ ಬರುವಾಗ ಎಂದು ಬರೆದದೆ. ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು. 43ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು. 44ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು. 45ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು#23.45 ಮೂಲ: ಒಂಭತ್ತು ತಾಸಿನ. ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು. 46ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. 47ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು. 48ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು. 49ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
ಯೇಸುವನ್ನು ಸಮಾಧಿಯಲ್ಲಿ ಇಟ್ಟದ್ದು
(ಮತ್ತಾ. 27.57-61; ಮಾರ್ಕ. 15.42-47; ಯೋಹಾ. 19.38-42)
50-51ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ. 52ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು 53ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ. 54ಆ ದಿನವು ಸೌರಣೆಯ ದಿನವಾಗಿತ್ತು; ಮತ್ತು ಸಬ್ಬತ್‍ದಿನ ಪ್ರಾರಂಭವಾಗುವದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು. 55ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ 56ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.

Currently Selected:

ಲೂಕ 23: KANJV-BSI

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy