ಫಿಲಿಪ್ಪಿಯರಿಗೆ 2:1-3
ಫಿಲಿಪ್ಪಿಯರಿಗೆ 2:1-3 KANCLBSI
ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ. ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು. ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.