ಫಿಲಿಪ್ಪಿಯರಿಗೆ 2:3-8
ಫಿಲಿಪ್ಪಿಯರಿಗೆ 2:3-8 KANCLBSI
ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ. ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ. ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ: ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ. ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ. ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.