YouVersion Logo
Search Icon

ಧರ್ಮೋ 34

34
ಮೋಶೆಯ ಮರಣ
1ಮೋಶೆಯು ಮೋವಾಬ್ಯರ ಮೈದಾನದಿಂದ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಪರ್ವತಕ್ಕೆ ಹೋಗಿ ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಯೆಹೋವನು ಕಾನಾನ್ ದೇಶವನ್ನೆಲ್ಲಾ ಅಂದರೆ ದಾನ್ ಪಟ್ಟಣದ ವರೆಗೂ ಗಿಲ್ಯಾದ್ ಸೀಮೆ, 2ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ, 3ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ, 4“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.
5ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು. 6ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು. 7ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ. 8ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
9ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
10ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. 11ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು. 12ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.

Currently Selected:

ಧರ್ಮೋ 34: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy