YouVersion Logo
Search Icon

ಪ್ರಲಾ 5

5
ದಯೆತೋರೆಂದು ಯೆಹೋವನಲ್ಲಿ ಪ್ರಾರ್ಥನೆ
1ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ;
ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.
2ನಮ್ಮ ಸ್ವತ್ತು ಪರರ ಪಾಲಾಗಿದೆ,
ನಮ್ಮ ಮನೆಗಳು ಪರರ ಕೈವಶವಾಗಿವೆ.
3ನಾವು ತಂದೆಯಿಲ್ಲದ ಅನಾಥರು,
ನಮ್ಮ ತಾಯಂದಿರು ವಿಧವೆಯರಾಗಿದ್ದಾರೆ.
4ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ;
ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.
5ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.
6ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ
ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.
7ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು;
ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
8ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.
9ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.
10ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.
11ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.
12ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.
13ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.
14ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.
15ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯ ನಲಿವುಗಳು ದುಃಖವಾಗಿ ಮಾರ್ಪಟ್ಟಿವೆ.
16ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ,
ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!
17ನಮ್ಮ ಹೃದಯವು ಕುಂದಿದೆ ಮತ್ತು
ನಮ್ಮ ಕಣ್ಣುಗಳು ಮೊಬ್ಬಾಗಿವೆ.
18ಯಾಕೆಂದರೆ ನರಿಗಳು ಹಾಳಾಗಿರುವ ಚೀಯೋನ್ ಪರ್ವತದ ಬಳಿ ಸಂಚರಿಸುತ್ತವೆ.
19ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ,
ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.
20ನೀನು ನಮ್ಮನ್ನು ಸಂಪೂರ್ಣವಾಗಿ ಮರೆತಿರುವುದೇಕೆ?
ಏಕೆ ನಮ್ಮನ್ನು ಇಷ್ಟುಕಾಲ ಕೈಬಿಟ್ಟಿದ್ದೀ?
21ಯೆಹೋವನೇ, ನೀನು ನಮ್ಮ ಮೇಲೆ ಬಲು ಸಿಟ್ಟುಗೊಂಡು ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
22ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.
ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;

Currently Selected:

ಪ್ರಲಾ 5: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy