ಅಪೊಸ್ತಲರ ಕಾರ್ಯಗಳು 16:25-26
ಅಪೊಸ್ತಲರ ಕಾರ್ಯಗಳು 16:25-26 KERV
ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.





