ಯೋವೇಲ 3:15-16
ಯೋವೇಲ 3:15-16 KERV
ಸೂರ್ಯಚಂದ್ರರು ಕತ್ತಲಾಗುವರು, ನಕ್ಷತ್ರಗಳು ಹೊಳೆಯುವುದಿಲ್ಲ. ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.