YouVersion Logo
Search Icon

ಹೋಶೇಯ 14

14
ಆಶೀರ್ವಾದಕ್ಕಾಗಿ ಪಶ್ಚಾತ್ತಾಪ ಪಡುತ್ತಾರೆ
1ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ.
ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.
2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು,
ಯೆಹೋವ ದೇವರ ಕಡೆಗೆ ತಿರುಗಿಕೊಂಡು,
ಅವರಿಗೆ ಹೇಳಿರಿ:
“ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ,
ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ.
ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.
3ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ.
ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ.
ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ,
‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ.
ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”
4“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು.
ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು.
ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.
5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು.
ಅವನು ತಾವರೆಯ ಹಾಗೆ ಬೆಳೆಯುವನು.
ತನ್ನ ಬೇರುಗಳನ್ನು ಲೆಬನೋನಿನ
ಹಾಗೆ ಆಳಕ್ಕೆ ಹರಡುವನು.
6ಅವನ ಕೊಂಬೆಗಳು ಹರಡಿಕೊಂಡು,
ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ
ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು.
7ಆತನ ನೆರಳಿನಲ್ಲಿ ಜನರು ವಾಸಿಸುವರು,
ಧಾನ್ಯದ ಹಾಗೆ ಜೀವಿಸುವರು,
ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು.
ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.
8ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ?
ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ.
ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ.
ನಿನ್ನ ಫಲವು ನನ್ನಿಂದ ಬರುವುದು.”
9ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ.
ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ.
ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ.
ನೀತಿವಂತರು ಅದರಲ್ಲಿ ನಡೆಯುವರು.
ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.

Currently Selected:

ಹೋಶೇಯ 14: KSB

Highlight

Share

Copy

None

Want to have your highlights saved across all your devices? Sign up or sign in