ಅರಣ್ಯಕಾಂಡ 2
2
ಇಸ್ರಾಯೇಲರ ಗೋತ್ರಗಳು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ
1ಯೆಹೋವ ದೇವರು ಮಾತನಾಡಿ ಮೋಶೆ ಮತ್ತು ಆರೋನನಿಗೆ ಹೇಳಿದ್ದೇನೆಂದರೆ: 2“ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.”
3ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ,
ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ. 4ಅವನ ಸೈನಿಕರ ಸಂಖ್ಯೆ 74,600 ಮಂದಿ.
5ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಗೋತ್ರದವರು. ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗ ನೆತನೆಯೇಲ್ ಎಂಬ ಸೈನ್ಯಾಧಿಪತಿ. 6ಅವನ ಸೈನಿಕರ ಸಂಖ್ಯೆ 54,400 ಮಂದಿ.
7ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ. 8ಅವನ ಸೈನಿಕರ ಸಂಖ್ಯೆ 57,400 ಮಂದಿ.
9ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು.
10ದಕ್ಷಿಣ ದಿಕ್ಕಿನಲ್ಲಿ:
ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ. 11ಅವನ ಸೈನಿಕರ ಸಂಖ್ಯೆ 46,500 ಮಂದಿ.
12ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನನ ಗೋತ್ರದವರು. ಸಿಮೆಯೋನನ ಮಕ್ಕಳಿಗೆ ಚುರೀಷದ್ದೈಯನ ಮಗನಾದ ಶೆಲುಮೀಯೇಲನು ಸೈನ್ಯಾಧಿಪತಿ. 13ಅವನ ಸೈನಿಕರ ಸಂಖ್ಯೆ 59,300 ಮಂದಿ.
14ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ. 15ಅವನ ಸೈನಿಕರ ಸಂಖ್ಯೆ 45,650 ಮಂದಿ.
16ರೂಬೇನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
17ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
18ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು:
ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ. 19ಅವನ ಸೈನಿಕರ ಸಂಖ್ಯೆ 40,500 ಮಂದಿ.
20ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ. 21ಅವನ ಸೈನಿಕರ ಸಂಖ್ಯೆ 32,200 ಮಂದಿ.
22ತರುವಾಯ ಬೆನ್ಯಾಮೀನ್ ಗೋತ್ರದವರು. ಬೆನ್ಯಾಮೀನನ ಮಕ್ಕಳಿಗೆ ಗಿದ್ಯೋನಿಯ ಮಗ ಅಬೀದಾನನು ಸೈನ್ಯಾಧಿಪತಿ. 23ಅವನ ಸೈನಿಕರ ಸಂಖ್ಯೆ 35,400 ಮಂದಿ.
24ಎಫ್ರಾಯೀಮನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,08,100 ಮಂದಿ. ಇವರು ಮೂರನೆಯವರಾಗಿ ಹೊರಡತಕ್ಕವರು.
25ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು:
ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ. 26ಅವನ ಸೈನಿಕರ ಸಂಖ್ಯೆ 62,700 ಮಂದಿ.
27ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಆಶೇರ್ ಗೋತ್ರದವರು. ಆಶೇರನ ಮಕ್ಕಳಿಗೆ ಒಕ್ರಾನನ ಮಗ ಪಗೀಯೇಲನು ಸೈನ್ಯಾಧಿಪತಿ. 28ಅವನ ಸೈನಿಕರ ಸಂಖ್ಯೆ 41,500 ಮಂದಿ.
29ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ. 30ಅವನ ಸೈನಿಕರ ಸಂಖ್ಯೆ 53,400 ಮಂದಿ.
31ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು.
32ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ. 33ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.
34ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.
Currently Selected:
ಅರಣ್ಯಕಾಂಡ 2: KSB
Highlight
Share
Copy
Want to have your highlights saved across all your devices? Sign up or sign in
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.