Logo YouVersion
Îcone de recherche

ಆದಿಕಾಂಡ 6:1-4

ಆದಿಕಾಂಡ 6:1-4 KSB

ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು. ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು. ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು. ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.

Vidéo pour ಆದಿಕಾಂಡ 6:1-4