1
ಲೂಕನ ಸುವಾರ್ತೆ 6:38
ಪರಿಶುದ್ದ ಬೈಬಲ್
KERV
ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
ប្រៀបធៀប
រុករក ಲೂಕನ ಸುವಾರ್ತೆ 6:38
2
ಲೂಕನ ಸುವಾರ್ತೆ 6:45
ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.
រុករក ಲೂಕನ ಸುವಾರ್ತೆ 6:45
3
ಲೂಕನ ಸುವಾರ್ತೆ 6:35
“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
រុករក ಲೂಕನ ಸುವಾರ್ತೆ 6:35
4
ಲೂಕನ ಸುವಾರ್ತೆ 6:36
ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.
រុករក ಲೂಕನ ಸುವಾರ್ತೆ 6:36
5
ಲೂಕನ ಸುವಾರ್ತೆ 6:37
“ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.
រុករក ಲೂಕನ ಸುವಾರ್ತೆ 6:37
6
ಲೂಕನ ಸುವಾರ್ತೆ 6:27-28
“ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.
រុករក ಲೂಕನ ಸುವಾರ್ತೆ 6:27-28
7
ಲೂಕನ ಸುವಾರ್ತೆ 6:31
ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.
រុករក ಲೂಕನ ಸುವಾರ್ತೆ 6:31
8
ಲೂಕನ ಸುವಾರ್ತೆ 6:29-30
ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ. ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.
រុករក ಲೂಕನ ಸುವಾರ್ತೆ 6:29-30
9
ಲೂಕನ ಸುವಾರ್ತೆ 6:43
“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
រុករក ಲೂಕನ ಸುವಾರ್ತೆ 6:43
10
ಲೂಕನ ಸುವಾರ್ತೆ 6:44
ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!
រុករក ಲೂಕನ ಸುವಾರ್ತೆ 6:44
គេហ៍
ព្រះគម្ពីរ
គម្រោងអាន
វីដេអូ