1
ಮತ್ತಾಯನ ಸುವಾರ್ತೆ 13:23
ಪರಿಶುದ್ದ ಬೈಬಲ್
KERV
“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
ប្រៀបធៀប
រុករក ಮತ್ತಾಯನ ಸುವಾರ್ತೆ 13:23
2
ಮತ್ತಾಯನ ಸುವಾರ್ತೆ 13:22
“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
រុករក ಮತ್ತಾಯನ ಸುವಾರ್ತೆ 13:22
3
ಮತ್ತಾಯನ ಸುವಾರ್ತೆ 13:19
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
រុករក ಮತ್ತಾಯನ ಸುವಾರ್ತೆ 13:19
4
ಮತ್ತಾಯನ ಸುವಾರ್ತೆ 13:20-21
“ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು. ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
រុករក ಮತ್ತಾಯನ ಸುವಾರ್ತೆ 13:20-21
5
ಮತ್ತಾಯನ ಸುವಾರ್ತೆ 13:44
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
រុករក ಮತ್ತಾಯನ ಸುವಾರ್ತೆ 13:44
6
ಮತ್ತಾಯನ ಸುವಾರ್ತೆ 13:8
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.
រុករក ಮತ್ತಾಯನ ಸುವಾರ್ತೆ 13:8
7
ಮತ್ತಾಯನ ಸುವಾರ್ತೆ 13:30
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
រុករក ಮತ್ತಾಯನ ಸುವಾರ್ತೆ 13:30
គេហ៍
ព្រះគម្ពីរ
គម្រោងអាន
វីដេអូ