ತೆರಿಗೆಗಾಗಿ ಕೊಡುವ ಒಂದು ನಾಣ್ಯವನ್ನು ನನಗೆ ತೋರಿಸಿರಿ” ಎಂದನು. ಜನರು ಒಂದು ಬೆಳ್ಳಿಯ ನಾಣ್ಯವನ್ನು ಆತನಿಗೆ ತೋರಿಸಿದರು. ಆಗ ಆತನು, “ನಾಣ್ಯದ ಮೇಲೆ ಯಾರ ಮುಖಚಿತ್ರವಿದೆ ಮತ್ತು ಯಾರ ಹೆಸರಿದೆ?” ಎಂದು ಕೇಳಿದನು.
ಜನರು, “ಅದು ಸೀಸರನ ಮುಖಚಿತ್ರ ಮತ್ತು ಹೆಸರು” ಎಂದು ಉತ್ತರಕೊಟ್ಟರು.
ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಅಂದನು.