“ನೋಹನ ಕಾಲದಲ್ಲಿ ಸಂಭವಿಸಿದಂತೆಯೇ ಮನುಷ್ಯಕುಮಾರನು ಬರುವಾಗಲೂ ಸಂಭವಿಸುತ್ತದೆ. ಜಲಪ್ರಳಯಕ್ಕಿಂತ ಮುಂಚೆ ಜನರು ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಮದುವೆಯಾಗುತ್ತಿದ್ದರು ಮತ್ತು ತಮ್ಮ ಮಕ್ಕಳಿಗೂ ಮದುವೆ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯೊಳಗೆ ಹೋಗುವ ತನಕ ಜನರು ಅವುಗಳನ್ನು ಮಾಡುತ್ತಲೇ ಇದ್ದರು. ಏನು ಸಂಭವಿಸುತ್ತಿದೆ ಎಂಬುದು ಅವರಿಗೆ ತಿಳಿದಿರಲಿಲ್ಲ. ಆಗ ಜಲಪ್ರಳಯವು ಬಂದು ಆ ಜನರನ್ನೆಲ್ಲಾ ನಾಶಮಾಡಿತು.
“ಮನುಷ್ಯಕುಮಾರನು ಬರುವಾಗಲೂ ಅದೇ ರೀತಿಯಾಗುವುದು.