ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು. ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು. ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.