ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.