ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು. ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು. ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.
ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.