1
ಮತ್ತಾಯ 16:24
ಕನ್ನಡ ಸಮಕಾಲಿಕ ಅನುವಾದ
KSB
ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ប្រៀបធៀប
រុករក ಮತ್ತಾಯ 16:24
2
ಮತ್ತಾಯ 16:18
ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.
រុករក ಮತ್ತಾಯ 16:18
3
ಮತ್ತಾಯ 16:19
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.
រុករក ಮತ್ತಾಯ 16:19
4
ಮತ್ತಾಯ 16:25
ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.
រុករក ಮತ್ತಾಯ 16:25
5
ಮತ್ತಾಯ 16:26
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?
រុករក ಮತ್ತಾಯ 16:26
6
ಮತ್ತಾಯ 16:15-16
ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.
រុករក ಮತ್ತಾಯ 16:15-16
7
ಮತ್ತಾಯ 16:17
ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
រុករក ಮತ್ತಾಯ 16:17
គេហ៍
ព្រះគម្ពីរ
គម្រោងអាន
វីដេអូ