1
ಮತ್ತಾಯ 26:41
ಕನ್ನಡ ಸಮಕಾಲಿಕ ಅನುವಾದ
KSB
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.
ប្រៀបធៀប
រុករក ಮತ್ತಾಯ 26:41
2
ಮತ್ತಾಯ 26:38
ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.
រុករក ಮತ್ತಾಯ 26:38
3
ಮತ್ತಾಯ 26:39
ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.
រុករក ಮತ್ತಾಯ 26:39
4
ಮತ್ತಾಯ 26:28
ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.
រុករក ಮತ್ತಾಯ 26:28
5
ಮತ್ತಾಯ 26:26
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.
រុករក ಮತ್ತಾಯ 26:26
6
ಮತ್ತಾಯ 26:27
ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ.
រុករក ಮತ್ತಾಯ 26:27
7
ಮತ್ತಾಯ 26:40
ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
រុករក ಮತ್ತಾಯ 26:40
8
ಮತ್ತಾಯ 26:29
ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.
រុករក ಮತ್ತಾಯ 26:29
9
ಮತ್ತಾಯ 26:75
ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.
រុករក ಮತ್ತಾಯ 26:75
10
ಮತ್ತಾಯ 26:46
ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.
រុករក ಮತ್ತಾಯ 26:46
11
ಮತ್ತಾಯ 26:52
ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.
រុករក ಮತ್ತಾಯ 26:52
គេហ៍
ព្រះគម្ពីរ
គម្រោងអាន
វីដេអូ