ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು, “ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ. ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು. ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.