1
ಮಾರ್ಕ 13:13
ಕನ್ನಡ ಸಮಕಾಲಿಕ ಅನುವಾದ
KSB
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
ប្រៀបធៀប
រុករក ಮಾರ್ಕ 13:13
2
ಮಾರ್ಕ 13:33
ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.
រុករក ಮಾರ್ಕ 13:33
3
ಮಾರ್ಕ 13:11
ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.
រុករក ಮಾರ್ಕ 13:11
4
ಮಾರ್ಕ 13:31
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
រុករក ಮಾರ್ಕ 13:31
5
ಮಾರ್ಕ 13:32
“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
រុករក ಮಾರ್ಕ 13:32
6
ಮಾರ್ಕ 13:7
ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
រុករក ಮಾರ್ಕ 13:7
7
ಮಾರ್ಕ 13:35-37
“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು. ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.
រុករក ಮಾರ್ಕ 13:35-37
8
ಮಾರ್ಕ 13:8
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.
រុករក ಮಾರ್ಕ 13:8
9
ಮಾರ್ಕ 13:10
ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.
រុករក ಮಾರ್ಕ 13:10
10
ಮಾರ್ಕ 13:6
ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
រុករក ಮಾರ್ಕ 13:6
11
ಮಾರ್ಕ 13:9
“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.
រុករក ಮಾರ್ಕ 13:9
12
ಮಾರ್ಕ 13:22
ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
រុករក ಮಾರ್ಕ 13:22
13
ಮಾರ್ಕ 13:24-25
“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’
រុករក ಮಾರ್ಕ 13:24-25
គេហ៍
ព្រះគម្ពីរ
គម្រោងអាន
វីដេអូ