ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು. ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.