ಯೋನ 2
2
ಯೋನನ ಪ್ರಾರ್ಥನೆ
1ಯೋನನು ಮೀನಿನ ಹೊಟ್ಟೆಯೊಳಗಿದ್ದಾಗ ದೇವರಾದ ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದನು:
2“ನಾನು ದೊಡ್ಡ ಆಪತ್ತಿನಲ್ಲಿದ್ದೆನು.
ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು.
ಆತನು ನನಗೆ ಉತ್ತರ ದಯಪಾಲಿಸಿದನು.
ನಾನು ಆಳವಾದ ಸಮಾಧಿಯೊಳಗಿದ್ದೆನು.
ನಾನು ನಿನಗೆ ಮೊರೆಯಿಟ್ಟಾಗ,
ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.
3“ನೀನು ನನ್ನನ್ನು ಸಮುದ್ರಕ್ಕೆ ಎಸೆದೆ.
ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು.
ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ.
ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.
4ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು.
ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.
5“ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟಿತು.
ನೀರು ನನ್ನ ಬಾಯಿಯನ್ನು ಮುಚ್ಚಿತು.
ಆಗ ನನಗೆ ಉಸಿರಾಡಲಾಗಲಿಲ್ಲ.
ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು.
ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.
6ನಾನು ಸಮುದ್ರದ ತಳದಲ್ಲಿದ್ದೆನು.
ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ.
‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು.
ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು.
ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.
7“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ.
ಆಗ ನಾನು ಯೆಹೋವನನ್ನು ಸ್ಮರಿಸಿದೆನು.
ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು.
ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.
8“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ.
ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.
9ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು.
ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು.
ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು.
ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು.
ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”
10ಆಗ ಯೆಹೋವನು ಆ ಮೀನಿಗೆ ಆಜ್ಞಾಪಿಸಲು ಆ ಮೀನು ಯೋನನನ್ನು ಒಣನೆಲದಲ್ಲಿ ತನ್ನ ಹೊಟ್ಟೆಯೊಳಗಿಂದ ಕಾರಿಬಿಟ್ಟಿತು.
ទើបបានជ្រើសរើសហើយ៖
ಯೋನ 2: KERV
គំនូសចំណាំ
ចែករំលែក
ចម្លង

ចង់ឱ្យគំនូសពណ៌ដែលបានរក្សាទុករបស់អ្នក មាននៅលើគ្រប់ឧបករណ៍ទាំងអស់មែនទេ? ចុះឈ្មោះប្រើ ឬចុះឈ្មោះចូល
Kannada Holy Bible: Easy-to-Read Version
All rights reserved.
© 1997 Bible League International

: