ಲೂಕನ ಸುವಾರ್ತೆ 4:18-19
ಲೂಕನ ಸುವಾರ್ತೆ 4:18-19 KERV
“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.”