ಮಲಾಕಿ 4

4
1“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
2“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ. 3ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.
4“ನನ್ನ ಸೇವಕನಾದ ಮೋಶೆಯ ಕಟ್ಟಳೆಗಳನ್ನು ಅನುಸರಿಸಲು ಮರೆಯಬೇಡಿ. ಹೋರೇಬ್ ಬೆಟ್ಟದಲ್ಲಿ ನಾನು ಆ ನ್ಯಾಯವಿಧಿಗಳನ್ನು ಅವನಿಗೆ ಕೊಟ್ಟೆನು. ಆ ಕಟ್ಟಳೆಗಳೆಲ್ಲಾ ಇಸ್ರೇಲ್ ಜನರಿಗಾಗಿ ಇರುವದು.”
5ಯೆಹೋವನು ಹೀಗೆನ್ನುತ್ತಾನೆ, “ನಾನು ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು. ಅವನು ಯೆಹೋವನಿಂದ ಪ್ರಾಪ್ತಿಯಾಗುವ ಭಯಂಕರವಾದ ಮಹಾ ನ್ಯಾಯತೀರ್ಪಿನ ಕಾಲದಲ್ಲಿ ಬರುವನು. 6ತಂದೆತಾಯಿಗಳು ಮಕ್ಕಳಿಗೂ ಮಕ್ಕಳು ತಂದೆತಾಯಿಗಳಿಗೂ ನಿಕಟ ಸಂಬಂಧಿಗಳಾಗುವಂತೆ ಅವನು ಮಾಡುವನು. ಇದು ನೆರವೇರಲೇಬೇಕು, ಇಲ್ಲದಿದ್ದಲ್ಲಿ ನಾನು ಬಂದು ನಿಮ್ಮ ದೇಶವನ್ನು ಸಂಪೂರ್ಣವಾಗಿ ನಾಶಮಾಡುವೆನು.”

ទើបបានជ្រើសរើសហើយ៖

ಮಲಾಕಿ 4: KERV

គំនូស​ចំណាំ

ចែក​រំលែក

ចម្លង

None

ចង់ឱ្យគំនូសពណ៌ដែលបានរក្សាទុករបស់អ្នក មាននៅលើគ្រប់ឧបករណ៍ទាំងអស់មែនទេ? ចុះឈ្មោះប្រើ ឬចុះឈ្មោះចូល