ಲೂಕ 4:9-12

ಲೂಕ 4:9-12 KSB

ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು, ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು. ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.