ಮತ್ತಾಯ 15:25-27

ಮತ್ತಾಯ 15:25-27 KSB

ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು. ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು. ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.