ಜೆಕರ್ಯ 4
4
ಚಿನ್ನದ ದೀಪಸ್ತಂಭಗಳು ಮತ್ತು ಎರಡು ಎಣ್ಣೆಮರಗಳು
1ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು, 2ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು.
ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ. 3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.
4ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.
5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು.
ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.
6ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
7“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”
8ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು, 9“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.
10“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”
11ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು.
12ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.
13ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು.
ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು.
14ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.
ទើបបានជ្រើសរើសហើយ៖
ಜೆಕರ್ಯ 4: KSB
គំនូសចំណាំ
ចែករំលែក
ចម្លង

ចង់ឱ្យគំនូសពណ៌ដែលបានរក្សាទុករបស់អ្នក មាននៅលើគ្រប់ឧបករណ៍ទាំងអស់មែនទេ? ចុះឈ្មោះប្រើ ឬចុះឈ្មោះចូល
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.