1
ಮತ್ತಾಯನ ಸುವಾರ್ತೆ 13:23
ಪರಿಶುದ್ದ ಬೈಬಲ್
KERV
“ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಆ ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
Compare
ಮತ್ತಾಯನ ಸುವಾರ್ತೆ 13:23ਪੜਚੋਲ ਕਰੋ
2
ಮತ್ತಾಯನ ಸುವಾರ್ತೆ 13:22
“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
ಮತ್ತಾಯನ ಸುವಾರ್ತೆ 13:22ਪੜਚੋਲ ਕਰੋ
3
ಮತ್ತಾಯನ ಸುವಾರ್ತೆ 13:19
“ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಆ ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದುಹಾಕುತ್ತಾನೆ.
ಮತ್ತಾಯನ ಸುವಾರ್ತೆ 13:19ਪੜਚੋਲ ਕਰੋ
4
ಮತ್ತಾಯನ ಸುವಾರ್ತೆ 13:20-21
“ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು. ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.
ಮತ್ತಾಯನ ಸುವಾರ್ತೆ 13:20-21ਪੜਚੋਲ ਕਰੋ
5
ಮತ್ತಾಯನ ಸುವಾರ್ತೆ 13:44
“ಪರಲೋಕರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಂದು ದಿನ ಒಬ್ಬನು ಆ ನಿಧಿಯನ್ನು ಕಂಡು ಬಹಳ ಸಂತೋಷದಿಂದ ಅದನ್ನು ಹೊಲದಲ್ಲಿ ಅಡಗಿಸಿಟ್ಟನು. ಬಳಿಕ ಅವನು ತನ್ನ ಆಸ್ತಿಯನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
ಮತ್ತಾಯನ ಸುವಾರ್ತೆ 13:44ਪੜਚੋਲ ਕਰੋ
6
ಮತ್ತಾಯನ ಸುವಾರ್ತೆ 13:8
ಬೇರೆ ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಅವು ಬೆಳೆದು ಕಾಳುಬಿಟ್ಟವು. ಕೆಲವು ಗಿಡಗಳು ನೂರರಷ್ಟು, ಕೆಲವು ಗಿಡಗಳು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಕಾಳುಬಿಟ್ಟವು.
ಮತ್ತಾಯನ ಸುವಾರ್ತೆ 13:8ਪੜਚੋਲ ਕਰੋ
7
ಮತ್ತಾಯನ ಸುವಾರ್ತೆ 13:30
ಸುಗ್ಗಿಕಾಲದವರೆಗೆ ಹಣಜಿಯೂ ಗೋಧಿಯೂ ಒಟ್ಟಿಗೆ ಬೆಳೆಯಲಿ. ಸುಗ್ಗಿಕಾಲದ ಸಮಯದಲ್ಲಿ ನಾನು ಕೆಲಸದವರಿಗೆ, ಮೊದಲು ಹಣಜಿಗಳನ್ನು ಕೂಡಿಸಿ ಅದನ್ನು ಸುಡುವುದಕ್ಕಾಗಿ ಹೊರೆ ಕಟ್ಟಿ, ನಂತರ ಗೋಧಿಯನ್ನು ಕೂಡಿಸಿ ಅದನ್ನು ನನ್ನ ಕಣಜಕ್ಕೆ ತನ್ನಿರಿ ಎಂದು ಹೇಳುವೆನು’ ಎಂದು ಉತ್ತರಕೊಟ್ಟನು.”
ಮತ್ತಾಯನ ಸುವಾರ್ತೆ 13:30ਪੜਚੋਲ ਕਰੋ
Home
ਬਾਈਬਲ
Plans
ਵੀਡੀਓ