1
ಮತ್ತಾಯ 5:15-16
ಕನ್ನಡ ಸಮಕಾಲಿಕ ಅನುವಾದ
KSB
ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
对照
探索 ಮತ್ತಾಯ 5:15-16
2
ಮತ್ತಾಯ 5:14
“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
探索 ಮತ್ತಾಯ 5:14
3
ಮತ್ತಾಯ 5:8
ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.
探索 ಮತ್ತಾಯ 5:8
4
ಮತ್ತಾಯ 5:6
ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.
探索 ಮತ್ತಾಯ 5:6
5
ಮತ್ತಾಯ 5:44
ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
探索 ಮತ್ತಾಯ 5:44
6
ಮತ್ತಾಯ 5:3
“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.
探索 ಮತ್ತಾಯ 5:3
7
ಮತ್ತಾಯ 5:9
ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.
探索 ಮತ್ತಾಯ 5:9
8
ಮತ್ತಾಯ 5:4
ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.
探索 ಮತ್ತಾಯ 5:4
9
ಮತ್ತಾಯ 5:10
ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.
探索 ಮತ್ತಾಯ 5:10
10
ಮತ್ತಾಯ 5:7
ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.
探索 ಮತ್ತಾಯ 5:7
11
ಮತ್ತಾಯ 5:11-12
“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.
探索 ಮತ್ತಾಯ 5:11-12
12
ಮತ್ತಾಯ 5:5
ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.
探索 ಮತ್ತಾಯ 5:5
13
ಮತ್ತಾಯ 5:13
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
探索 ಮತ್ತಾಯ 5:13
14
ಮತ್ತಾಯ 5:48
ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.
探索 ಮತ್ತಾಯ 5:48
15
ಮತ್ತಾಯ 5:37
ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.
探索 ಮತ್ತಾಯ 5:37
16
ಮತ್ತಾಯ 5:38-39
“ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.
探索 ಮತ್ತಾಯ 5:38-39
17
ಮತ್ತಾಯ 5:29-30
ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು. ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.
探索 ಮತ್ತಾಯ 5:29-30
主页
圣经
计划
视频