YouVersion 標識
搜索圖示

ಮತ್ತಾ 1

1
ಯೇಸು ಕ್ರಿಸ್ತನ ವಂಶಾವಳಿ
1ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.
2ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು. 3ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು. 4ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು. 5#1:5 ಲೂಕ 3:28-38ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು #1:5 ರೂತ. 4:21-22ಓಬೇದನು ರೂತಳಲ್ಲಿ #1:5 ರೂತ. 4:21-22ಹುಟ್ಟಿದವನು. ಓಬೇದನ ಮಗನು ಇಷಯನು. 6ಇಷಯನ ಮಗನು ಅರಸನಾದ ದಾವೀದನು. #1:6 2 ಸಮು 12:24ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು. 7ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು. 8ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು. 9ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು. 10ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು. 11ಆಮೋನ ಮಗನು ಯೋಷೀಯನು. #1:11 2 ಅರಸು. 24:14, 15; 25-11ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು. 12ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು 13ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು. 14ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು. 15ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು. 16ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.
17ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.
ಯೇಸು ಕ್ರಿಸ್ತನ ಜನನವು
18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, #1:18 ಲೂಕ 1:27,35ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. 20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. 21#1:21 ಲೂಕ 1:31ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,
23 # 1:23 ಯೆಶಾ 7:14 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು;
ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”
24ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. 25ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.

醒目顯示

分享

複製

None

想要在所有設備上保存你的醒目顯示嗎? 註冊或登入